Feb 7, 2016

ಸಾಹಿತ್ಯ ಪರಿಷತ್ತಿನ ಅದ್ಯಕ್ಷ ಚುನಾವಣಾ ಸ್ಪರ್ದಿಗಳಿಗೊಂದಿಷ್ಟು ಪ್ರಶ್ನೆಗಳು

ಕು.ಸ.ಮಧುಸೂದನ್
1.ಸಾಹಿತ್ಯ ಪರಿಷತ್ತಿನ ಚುನಾವಣೆಗೆ ನಿಂತಿರೊ ಸ್ಪರ್ದಿಗಳಿಗೆ ವೆಚ್ಚ ಮಾಡುವ ಹಣದ ಮಿತಿಯೇನಾದರು ಇದೆಯೇ?
2.ಹೋಗಲಿ ನಾಮಪತ್ರ ಹಾಕುವ ಮುಂಚೆ ರಾಜಕಾರಣಿಗಳಂತೆ ತಮ್ಮ ಸ್ಥಿರ-ಚರಾಸ್ತಿಗಳನ್ನು ಘೋಷಿಸಿಕೊಳ್ಳಬೇಕೆ?
3. ಗೆದ್ದಮೇಲೆ ಲೋಕಾಯುಕ್ತಕ್ಕೂ ಆಸ್ತಿ ವಿವರ ಸಲ್ಲಿಸಬೇಕೇ?
4.ಇವ್ಯಾವು ಇಲ್ಲವೆಂದಾದರೆ ತಾವುಗಳು ಈ ವಿಚಾರದಲ್ಲಿ ಯಾರಿಗೆ ಹೊಣೆಗಾರರಾಗಿರುತ್ತೀರಿ?
5.ಇನ್ನು ಮತದಾರರ ಸಂಖ್ಯೆ ಕನಿಷ್ಠ ಒಂದು ಲಕ್ಷವಿದ್ದರೆ, ನೀವು ಅವರಿಗೆ ಪತ್ರ ಬರೆಯಲೇ ಸುಮಾರು 5 ಲಕ್ಷ ರೂಪಾಯಿ ಬೇಕಾಗುತ್ತದೆ. ಅಷ್ಟು ದುಡ್ಡನ್ನು ಎಲ್ಲಿಂದ ತರುತ್ತೀರಿ?
6. ಪ್ರತಿ ತಾಲೂಕಿಗೂ ನಿಮ್ಮ ಕಾರಲ್ಲಿ ಬೇಟಿ ಕೊಡುವುದೇ ಆದಲ್ಲಿ ಕನಿಷ್ಠ 5 ಲಕ್ಷ ರೂಪಾಯಿ ಖರ್ಚಾಗುತ್ತದೆ. ಈ ದುಡ್ಡಿಗೇನು ಮಾಡುತ್ತೀರಿ?
7.ಹೋಗಲಿ ಚುನಾವಣೆ ಖರ್ಚಿಗೆಂದು ನೀವುಗಳೇನಾದರು ಪಾರ್ಟಿ ಫಂಡ್ ತರಾ ಹಣ ಸಂಗ್ರಹಿಸುತ್ತೀರಾ? ಹಾಗೆ ಸಂಗ್ರಹಿಸಿದರೆ ಕೊಟ್ಟವರ ಹೆಸರುಗಳನ್ನು ಸಾರ್ವಜನಿಕವಾಗಿ ಪ್ರಕಟಿಸುತ್ತೀರಾ?
8.ಯಾವುದಾದರು ರಾಜಕೀಯ ಪಕ್ಷಗಳ ಬೆಂಬಲ ನಿಮಗೆ ಇದೆಯಾ? ಇದ್ದರೆ ಯಾವ ಪಕ್ಷ ಯಾವ ಕಾರಣ ವಿವರಿಸುತ್ತೀರಾ?
9. ಇಷ್ಟೆಲ್ಲಾ ಖರ್ಚುಮಾಡಿ ಗೆದ್ದ ಮೇಲೆ ಕಳೆದುಕೊಂಡ ಹಣವನ್ನು ಮರಳಿ ಗಳಿಸಲು ಏನೆಲ್ಲಾ ಮಾಡುತ್ತೀರಿ
ಕೊನೆಯ ಪ್ರಶ್ನೆಗೆ ಕ್ಷಮೆಯಿರಲಿ: ಯಾಕೆಂದರೆ ನೀವು ಚುನಾವಣೆಗೆ ಖರ್ಚು ಮಾಡುತ್ತಿರುವು ಕಡಲೆಬೀಜಗಳಲ್ಲ ಲಕ್ಷಲಕ್ಷ ರೂಪಾಯಿಗಳು!
ಉತ್ತರ ಕೊಡಲೇ ಬೇಕೆಂಬ ಕಡ್ಡಾಯವೇನಿಲ್ಲ. ಇಂತಹ ಪ್ರಶ್ನೆಗಳನ್ನು ರಾಜಕಾರಣಿಗಳಿಗೆ ಕೇಳಿಕೇಳಿ ನಮಗೆ ಅಭ್ಯಾಸವಾಗಿ ಹೋಗಿದೆ........

No comments:

Post a Comment