Oct 15, 2018

ಬಾಜಪಕ್ಕೆ ಲಾಭ ತರಲಿರುವ ಕಾಂಗ್ರೆಸ್-ಜನತಾದಳದ ಉಪಚುನಾವಣಾ ಮೈತ್ರಿ!

ಕು.ಸ.ಮಧುಸೂದನ ರಂಗೇನಹಳ್ಳಿ
ಕಾಂಗ್ರೆಸ್ ಮತ್ತು ಜನತಾದಳದ ಮೈತ್ರಿಯ ದೆಸೆಯಿಂದ ಹಳೆಯ ಮೈಸೂರು ಭಾಗದಲ್ಲಿ ಬಾಜಪ ಬೇರೂರಲು ಸುವರ್ಣಾವಕಾಶವೊಂದು ಸೃಷ್ಠಿಯಾಗಿದೆಯೇ? ಹೌದೆನ್ನುತ್ತಾರೆ, ಹಳೆ ಮೈಸೂರು ಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರು! ಅವರುಗಳ ಈ ಭಯ ಅಕಾರಣವೇನಲ್ಲ.

ನವೆಂಬರ್ ಮೊದಲ ವಾರದಲ್ಲಿ ನಡೆಯಲಿರುವ ಮೂರು ಸಂಸತ್ ಸ್ಥಾನಗಳ ಮತ್ತು ಎರಡು ವಿದಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪಚುನಾವಣೆಗಳಿಗೆ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳ ಮೈತ್ರಿಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿಯುವುದು ಬಹುತೇಕ ಸ್ಪಷ್ಟವಾಗಿದೆ. ರಾಮನಗರ ವಿದಾನಸಭಾ ಕ್ಷೇತ್ರದಲ್ಲಿ ಜನತಾದಳವು (ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರ ಪತ್ನಿ, ಮಾಜಿ ಶಾಸಕಿ ಶ್ರೀಮತಿ ಅನಿತಾ ಕುಮಾರಸ್ವಾಮಿ ಅಭ್ಯರ್ಥಿ!) ಮಂಡ್ಯಮತ್ತು ಶಿವಮೊಗ್ಗ ಸಂಸತ್ ಕ್ಷೇತ್ರಗಳಲ್ಲಿ ಬಹುತೇಕ ಜನತಾದಳದ ಅಭ್ಯರ್ಥಿಗಳೇ ಕಣಕ್ಕಿಳಿಯಲಿರುವುದು ಖಚಿತವಾಗಿದೆ. ಅದರಲ್ಲೂ ಮಂಡ್ಯ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಇದುವರೆಗು ಕಾಂಗ್ರೆಸ್ ಮತ್ತು ಜನತಾದಳಗಳೇ ಸಾಂಪ್ರದಾಯಿಕ ಎದುರಾಳಿಗಳಾಗಿದ್ದು ಬಾಜಪ ಯಾವತ್ತಿಗೂ ಮೂರನೇ ಸ್ಥಾನದಲ್ಲಿರುತ್ತಿತ್ತು. ಇನ್ನು ಶಿವಮೊಗ್ಗದಲ್ಲಿ ಕಾಂಗ್ರೆಸ್ ಮತ್ತು ಬಾಜಪದ ನಡುವೆ ಹೋರಾಟವಿರುತ್ತಿದ್ದರೂ ಜನತಾದಳಕ್ಕೂ ಇಲ್ಲಿ ಬೇರು ಮಟ್ಟಿನ ಕಾರ್ಯಕರ್ತರುಗಳ ಪಡೆ ಇದೆ ಎನ್ನಬಹುದು. 

Oct 4, 2018

'ವಿದಾನಸಭೆ ವಿಸರ್ಜನೆಯಾದ ಕ್ಷಣದಿಂದಲೇ ನೀತಿ ಸಂಹಿತೆ ಜಾರಿ': ಕೇಂದ್ರ ಚುನಾವಣಾ ಆಯೋಗದ ಅಪರೂಪದ ನಿರ್ದಾರದ ಹಿಂದಿರುವುದೇನು?

ಕು.ಸ.ಮಧುಸೂದನ ರಂಗೇನಹಳ್ಳಿ
ತೆಲಂಗಾಣ ವಿದಾನಸಭೆ ವಿಸರ್ಜನೆಯಾದ ಕ್ಷಣದಿಂದಲೇ ಆ ರಾಜ್ಯದಲ್ಲಿ ನೀತಿಸಂಹಿತೆ ಜಾರಿಯಾಗಿದ್ದು, ತೆಲಂಗಾಣದ ಉಸ್ತುವಾರಿ ಸರಕಾರವಾಗಲಿ ಅಥವಾ ಆ ರಾಜ್ಯ ಕುರಿತಂತೆ ಕೇಂದ್ರ ಸರಕಾರವಾಗಲಿ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಬಾರದೆಂಬ ಆದೇಶವನ್ನು ಹೊರಡಿಸಿದೆ. 

ಕೇಂದ್ರ ಸರಕಾರದ ಆಜ್ಞಾಪಾಲಕನಂತೆ ವರ್ತಿಸುವ ಸಾಂವಿಧಾನಿಕ ಸಂಸ್ಥೆಯೊಂದು ತೆಗೆದುಕೊಳ್ಳಬಹುದಾದ ಅವೈಜ್ಞಾನಿಕ ಮತ್ತು ಪ್ರಜಾಪ್ರಭುತ್ವ ವಿರೋಧಿ ನಿರ್ದಾರವನ್ನು ನಮ್ಮ ಕೇಂದ್ರ ಚುನಾವಣಾ ಆಯೋಗ ಈಗ ತೆಗೆದುಕೊಂಡಿದೆ. ತೆಲಂಗಾಣದಲ್ಲಿ ಹಾಲಿ ಇರುವ ಕೆ.ಚಂದ್ರಶೇಖರ್ ರಾವ್ ಅವರ ಸರಕಾರವು ಉಸ್ತುವಾರಿ ಸರಕಾರವಾಗಿದ್ದು, ಜನಪರವಾದ ಯಾವುದೇ ಜನಪ್ರಿಯ ಯೋಜನೆಗಳನ್ನು ಹೊಸದಾಗಿ ಘೋಷಿಸಲು ಅದು ಅಧಿಕಾರ ಹೊಂದಿಲ್ಲವೆಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ ಕೆ.ಚಂದ್ರಶೇಖರರಾವ್ ಇದೇ ಸೆಪ್ಟೆಂಬರ್ ಆರನೇ ತಾರೀಖು ವಿದಾನಸಭೆಯನ್ನು ಅವಧಿಗೆ ಮುನ್ನವೇ ವಿಸರ್ಜಿಸಿದ್ದನ್ನು ನಾವಿಲ್ಲಿ ನೆನಪಿಸಿಕೊಳ್ಳಬಹುದು. ಹಾಗೆ ವಿದಾನಸಭೆಯನ್ನು ವಿಸರ್ಜಿಸಿದಾಗ ಶ್ರೀ ರಾವ್ ಅವರು ಬಹುಶ: ಅಕ್ಟೋಬರ್ ತಿಂಗಳಲ್ಲಿ ರಾಜ್ಯದಲ್ಲಿ ಚುನಾವಣೆಗಳು ಘೋಷಣೆಯಾಗಬಹುದು ಮತ್ತು ಡಿಸೆಂಬರ್ ಮದ್ಯಭಾಗದ ಹೊತ್ತಿಗೆ ಚುನಾವಣೆಗಳು ನಡೆಯಬಹುದು. ಈ ಬಗ್ಗೆ ನಾನು ಚುನಾವಣಾ ಆಯೋಗದ ಜೊತೆ ಚರ್ಚಿಸಿದ್ದೇನೆಂದೂ ಹೇಳಿದ್ದರು.