ಆಗ 1, 2026
ಇಥೆನಾಲ್ ಮಿಶ್ರಿತ ಪೆಟ್ರೋಲಿನ ಸುತ್ತ... ಭಾಗ ೨
ಡಾ. ಅಶೋಕ್. ಕೆ. ಆರ್.
ಈ ಹಿಂದಿನ ಪೋಸ್ಟ್ ಓದಿಲ್ಲವಾದರೆ ಒಮ್ಮೆ ಓದಿ ಬನ್ನಿ. ಓದಲು ಇಲ್ಲಿ ಕ್ಲಿಕ್ಕಿಸಿ
ಇ-೨೦ ಪೆಟ್ರೋಲ್ ಬಗ್ಗೆ, ಅದರಿಂದ ವಾಹನಗಳಿಗಾಗುತ್ತಿರುವ ಹಾನಿಯ ಬಗ್ಗೆ ವಿಪರೀತ ಚರ್ಚೆಗಳು ಶುರುವಾದ ಮೇಲೆ ಪೆಟ್ರೋಲಿಯಂ ಸಚಿವರಲ್ಲದ, ಹೆದ್ದಾರಿ ಸಚಿವರು ಒಂದಾದ ಮೇಲೊಂದರಂತೆ ಹೇಳಿಕೆಗಳನ್ನು ಕೊಟ್ಟರು. ಇ-೨೦ ಪೆಟ್ರೋಲಿನಿಂದ ಗಾಡಿಗಳಿಗೆ ಯಾವುದೇ ತರದ ಹಾನಿಯಾಗುವುದಿಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸುಳ್ಳು ಸುಳ್ಳೇ ಹೇಳುತ್ತಿದ್ದಾರೆ ಅಂತ ಆರೋಪಿಸಿದರು. ಅಂತರ್ಜಾಲ ತಾಣಗಳನ್ನೂ ಸೇರಿಸಿ ಒಂದಷ್ಟು ಜನರ ಮೇಲೆ ಕೇಸೂ ದಾಖಲಿಸಲಾಯಿತು. ಇರಲಿ.
ಜೂನ್ 19, 2026
ಇಥೆನಾಲ್ ಮಿಶ್ರಿತ ಪೆಟ್ರೋಲಿನ ಸುತ್ತ...
ಜೂನ್ 18, 2026
ಕರಾವಳಿಯ ಕೋಮು ಗಲಭೆಗಳಲ್ಲಿ ಸತ್ತವರ ಕುಟುಂಬಗಳ ಕಣ್ಣೀರ ಕತೆಗಳು.
ಡಾ. ಅಶೋಕ್ ಕೆ ಆರ್
ನಾನು ಕನ್ನಡದಲ್ಲಿ ಓದಿದ ವಿಶಿಷ್ಟ ಪುಸ್ತಕಗಳಲ್ಲಿ "ಕರಾವಳಿಯ ರಕ್ತ - ಕಣ್ಣೀರು" ಪ್ರಮುಖ ಸ್ಥಾನವನ್ನೇ ಪಡೆಯುತ್ತದೆ.
ಮತಾಂಧರ ದ್ವೇಷದಿಂದ, ಧಾರ್ಮಿಕ ದ್ವೇಷದ ಕಾರಣದಿಂದ ಕೊಲೆಯೊಂದು ನಡೆದರೆ ಮುಖ್ಯವಾಹಿನಿ ವಾಹಿನಿಗಳಲ್ಲಿ ಸುದ್ದಿಯಾಗುತ್ತದೆ. ಕೊಲೆಯಾದವರ ಸಾಮಾಜಿಕ ಸ್ಥಾನಮಾನ, ರಾಜಕೀಯ ಹಿನ್ನೆಲೆ, ಅಪರಾಧಗಳ ಹಿನ್ನೆಲೆಯ ಆಧಾರದ ಮೇಲೆ ಸುದ್ದಿ ಮೊದಲ ಪುಟದಲ್ಲಿ ದೊಡ್ಡದಾಗಿ ಪ್ರಕಟವಾಗುತ್ತದೋ ಅಥವಾ ಎರಡು ಮೂರನೇ ಪುಟಗಳ ಸ್ಥಳೀಯ ಆವೃತ್ತಿಯಲ್ಲಿ ಪುಟ್ಟ ಕಾಲಂನಲ್ಲಿ ಪ್ರಕಟವಾಗುತ್ತದೋ ಎನ್ನುವುದು ನಿರ್ಧಾರವಾಗುತ್ತದೆ. ಟಿವಿಯಲ್ಲಿ ಹೆಚ್ಚು ಸಮಯ ಸುದ್ದಿಯಾಗಲು ಸಹ ಇದೇ ಮಾನದಂಡಗಳು ಅನ್ವಯ. ರಾಜಕೀಯ ಪಕ್ಷಗಳು ನೇರವಾಗಿ ಅಖಾಡಕ್ಕೆ ಧುಮುಕಿದರೆ ಮತ್ತೊಂದಷ್ಟು ದಿನಗಳ ಕಾಲ ಸುದ್ದಿಯ ಪ್ರಸಾರವಾಗುತ್ತದೆ.
ಜೂನ್ 4, 2026
ಸಿದ್ಧರಾಮಯ್ಯನವರೀಗ ಮಾಜಿ ಮುಖ್ಯಮಂತ್ರಿ.
ಡಾ. ಅಶೋಕ್. ಕೆ. ಆರ್
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ನಾ ಮತ ಚಲಾಯಿಸಲು ಪ್ರಮುಖ ಕಾರಣ ಸಿದ್ಧರಾಮಯ್ಯನವರು ಮತ್ತೊಮ್ಮೆ ಸಿಎಂ ಆಗಲಿ ಎಂದು.
ಜುಲೈ 30, 2025
ಜಾತಿಯೆಂಬ ವಾಸ್ತವ ಮತ್ತು ಒಂದು ಸ್ವೀಕೃತಿಗೆ ಕಾಯುತ್ತಿರುವ ಜನರು...
ಜೂನ್ 10, 2025
ಬೆಚ್ಚಿ ಬೀಳಿಸದ "ಸ್ಟೋಲನ್"
ಡಿಸೆಂ 28, 2024
ಕ್ಯಾಪಿಟಲಿಸಂ ಬಿಟ್ಟು ಬೇರೆ ಆಯ್ಕೆ ನಿಜಕ್ಕೂ ನಮ್ಮ ಮುಂದಿದೆಯೇ?
![]() |
| image source: yourdictionary |
ಡಾ. ಅಶೋಕ್. ಕೆ. ಆರ್.
ಯಾರಾದರೂ
ಎಡಪಂಥೀಯ – ಬಲಪಂಥೀಯ ಅಂತ ಮಾತನಾಡುವಾಗ, ವಾದ ಮಾಡುವಾಗ ನಿಜಕ್ಕೂ ಈಗ ನಮ್ಮಲ್ಲಿ ಎಡಪಂಥೀಯತೆ – ಬಲಪಂಥೀಯತೆ
ಅನ್ನುವುದಿದೆಯೇ ಎನ್ನುವ ಪ್ರಶ್ನೆ ನನ್ನಲ್ಲಿ ಮೂಡುತ್ತಲೇ ಇರುತ್ತದೆ. ಈ ರೀತಿಯಾಗಿ ಮಾತನಾಡುವ, ವಾದ
ಮಾಡುವ ನಾವೆಲ್ಲರೂ ಬಂಡವಾಳಶಾಹಿ – ಕ್ಯಾಪಿಟಲಿಸ್ಟುಗಳೇ ಅಲ್ಲವೇ ಎನ್ನುವ ಯೋಚನೆ ಸುಳಿಯುತ್ತದೆ. ಅಬ್ಬಬ್ಬಾ
ಅಂದರೆ ಒಂಚೂರು ಎಡಕ್ಕಿರುವ ಅಥವಾ ಒಂದಷ್ಟು ಬಲಕ್ಕಿರುವ ಕ್ಯಾಪಿಟಲಿಸ್ಟುಗಳಷ್ಟೇ ಅಲ್ಲವೇ ನಾವು ಬಹುತೇಕರು…
ನರಸಿಂಹರಾವ್ ಕಾಲದಲ್ಲಿ, ಮನಮೋಹನ್ ಸಿಂಗ್‌ರವರು ಹಣಕಾಸು ಸಚಿವರಾಗಿದ್ದಾಗಿನ ಸಮಯದಲ್ಲಿ ಇಂಡಿಯಾ ಜಾಗತೀಕರಣಕ್ಕೆ ಸಂಪೂರ್ಣವಾಗಿ ತೆರೆದುಕೊಂಡಿತು. ಹಲವು ವರುಷಗಳ ಕಾಲ ವಿಧವಿಧದ ವಿರೋಧಗಳನ್ನು ಈ ಹೊಸ ಆರ್ಥಿಕ ನೀತಿಗಳು ಎದುರಿಸಿತಾದರೂ ಅಂತಿಮವಾಗಿ ಕ್ಯಾಪಿಟಲಿಸಂ ಎನ್ನುವ ಸಿದ್ಧಾಂತವಲ್ಲದ ಸಿದ್ಧಾಂತ ಉಳಿದೆಲ್ಲ ಸಿದ್ಧಾಂತಗಳನ್ನು ಮೀರಿ ಜಯಿಸಲಾರಂಭಿಸಿತು ಎನ್ನುವುದು ತಿರಸ್ಕರಿಸಲಾಗದ ವಾಸ್ತವ.
ಏಪ್ರಿ 18, 2023
ಕಾಡಿನ ನ್ಯಾಯಕ್ಕೆ ವಿರುದ್ಧವಾದ "ದಿ ಎಲಿಫೆಂಟ್ ವಿಸ್ಪರರ್ಸ್"
| ಚಿತ್ರಮೂಲ: ಎಕನಾಮಿಕ್ ಟೈಮ್ಸ್ |
ಕಾಡ ನಡುವಿನಲ್ಲಿ ಮರಿಯಾನೆಯೊಂದು ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗುತ್ತದೆ. ಆಹಾರ ಹುಡುಕುವ, ನೀರನ್ನರಸುವ ಗುಣಗಳನ್ನು ಹಿಂಡಿನ ಹಿರಿಯರಿಂದ ಇನ್ನೂ ಕಲಿಯದ ಮರಿಯಾನೆಗೆ ಜೀವವುಳಿಸಿಕೊಳ್ಳುವುದು ಕಷ್ಟದ ಸಂಗತಿಯೇ ಸರಿ. ಮರಿಯಾನೆಯ ಕೂಗಾಟ ಅರಣ್ಯ ಇಲಾಖೆಯ ಕಿವಿಗೆ ತಲುಪುತ್ತದೆ. ಕಾಡಿನ ನಿಯಮಗಳಿಂದ ರಕ್ಷಿಸಲ್ಪಟ್ಟ ಈ ಮರಿಯಾನೆಯನ್ನು ಸಾಕುವ ಜವಾಬ್ದಾರಿಯನ್ನು ಇಲಾಖೆಯ ಕೆಲಸಗಾರರಾದ, ಮೂಲತಃ ಆದಿವಾಸಿಗಳಾದ ಇಬ್ಬರಿಗೆ ವಹಿಸಲಾಗುತ್ತದೆ. ಆ ಈರ್ವರ ನಡುವಿನ ವೈಯಕ್ತಿಕ ಸಂಬಂಧ, ಆನೆಯನ್ನು ಸಾಕಿ ಸಲಹುವ ಪರಿ, ಆನೆ ಜೊತೆಗಿನ ಮಮಕಾರದ ಸಂಬಂಧವೇ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಹೂರಣ.
ಆಸ್ಕರ್ರಿಗೆ ಭಾರತದಿಂದ ಕಳುಹಿಸಲ್ಪಟ್ಟ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮವೆಂಬ ಪ್ರಶಸ್ತಿಯೂ ದೊರೆತು ಖ್ಯಾತಿಗಳಿಸಿದ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ನೋಡಲು ಲಭ್ಯವಿದೆ. ಆಸ್ಕರ್ ದೊರೆಯುವ ಮುಂಚೆ ಈ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೆ. ನೋಡಿದ ಯಾರಿಗಾದರೂ ಕಣ್ಣಂಚಿನಲ್ಲಿ ನೀರು ತರಿಸುವ ಚಿತ್ರವಿದು. ನಾನೂ ಅದಕ್ಕೆ ಹೊರತಲ್ಲ.
ಆಗ 19, 2022
ಎಲ್ಲಕಿಂತ ಜೀವ ಮುಖ್ಯ…
ಜೂನ್ 4, 2020
ಬೇಸಿಕಲಿ ವಿ ಆರ್ ಬ್ಲಡಿ ಹಿಪೋಕ್ರೈಟ್ಸ್…
ಅಕ್ಟೋ 4, 2019
ಗಾಂಧಿ ಜಯಂತಿಯ ದಿನ ಪ್ರಧಾನಿ ಹೇಳಿದ ಸುಳ್ಳು.
ಅಕ್ಟೋ 2, 2019
ಬಲಾಡ್ಯ ರಾಜಕೀಯ ಶಕ್ತಿಯಾಗಬೇಕಿರುವ ಕನ್ನಡ ಭಾಷಿಕ ಸಮುದಾಯ
ಸೆಪ್ಟೆಂ 24, 2019
ಬಂಡವಾಳ ಹೂಡಿಕೆದಾರರ ಸಮಾವೇಶ ಎಂಬ ಬೃಹತ್ ಪ್ರಹಸನ!
ಆಗ 28, 2019
ಸಮ್ಮಿಶ್ರ ಸರಕಾರದ ಪತನ: ನಾಯಕರುಗಳ ಆರೋಪ-ಪ್ರತ್ಯಾರೋಪ!
ಆಗ 24, 2019
ನೈತಿಕತೆಯ ಬಗೆಗೆ ಕೆಲವು ಮೂರ್ಖ ಪ್ರಶ್ನೆಗಳು!
ಜೂನ್ 28, 2019
'ಏಕಕಾಲಕ್ಕೆ ಚುನಾವಣೆ' ಬಾಜಪದ ಹಳೆಯಜೆಂಡಾ
ಮೇ 30, 2019
ದಕ್ಷಿಣವನ್ನು ಬಾಜಪ ಯಾಕೆ ಗೆಲ್ಲಲಾಗಲಿಲ್ಲ?
ದೇಶದ ಉದ್ದಗಲಕ್ಕೂ ತನ್ನ ಪ್ರಭಾವಳಿಯನ್ನು ವಿಸ್ತರಿಸಿ ಮುನ್ನೂರಕ್ಕೂ ಅಧಿಕಸ್ಥಾನಗಳನ್ನು ಗೆದ್ದ ಬಾಜಪ ದಕ್ಷಿಣ ಭಾರತದಲ್ಲಿ ಮಾತ್ರ ಬಹುತೇಕ ವಿಫಲವಾಗಿದೆ. ಕರ್ನಾಟಕ ಒಂದನ್ನು ಹೊರತು ಪಡಿಸಿದರೆ ಮಿಕ್ಕಂತೆ ಆಂದ್ರಪ್ರದೇಶ, ತಮಿಳುನಾಡು, ಪುದುಚೇರಿ, ಕೇರಳಗಳಲ್ಲಿ ಕನಿಷ್ಠ ಖಾತೆ ತೆರೆಯಲೂ ಅದು ವಿಫಲವಾಗಿದ್ದು ತೆಲಂಗಾಣದಲ್ಲಿ ಮಾತ್ರ ಕಷ್ಟ ಪಟ್ಟು ನಾಲ್ಕು ಸ್ಥಾನಗಳನ್ನು ಗೆದ್ದಿದೆ.
ಯಾವತ್ತಿಗೂ ಬಾಜಪ ಖಾತೆ ತೆರೆಯಲೇ ಅಸಾದ್ಯವೆಂಬ ಬಲವಾದ ಅನಿಸಿಕೆಯಿದ್ದ ಈಶಾನ್ಯಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾದ ಅದು ದಕ್ಷಿಣದಲ್ಲಿ ನೆಲೆ ಕಂಡುಕೊಳ್ಳಲು ಏದುಸಿರು ಬಿಡುತ್ತಿರುವುದಾದರೂ ಯಾಕೆಂದು ವಿಶ್ಲೇಷಿಸುತ್ತ ಹೋದರೆ ಹಲವು ಐತಿಹಾಸಿಕ ಕಾರಣಗಳು ಕಂಡುಬರುತ್ತವೆ.
ಮೇ 1, 2019
ಇಂಡಿಯಾದ ಚುನಾವಣೆಗಳು: ಡಿಸ್ಕೌಂಟ್ ಸೇಲಿನ ಬಿಗ್ ಬಜಾರುಗಳು
ಏಪ್ರಿ 28, 2019
ಚುನಾವಣಾ ನೀತಿಸಂಹಿತೆ ಎಂಬ ಪ್ರಹಸನ
ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ.
ಇಲ್ಲಿನ ಮತದಾರರ ಸಂಖ್ಯೆ ತೊಂಭತ್ತು ಕೋಟಿ.ಇಪ್ಪತ್ತು ಲಕ್ಷ ಮತಯಂತ್ರಗಳು. ಒಂದೂಕಾಲು ಕೋಟಿಗೂ ಅಧಿಕ ಮತಗಟ್ಟೆಯನ್ನು ನಿರ್ವಹಿಸುವ ಸಿಬ್ಬಂದಿಗಳು, ಎರಡೂವರೆ ಕೋಟಿಗೂ ಅಧಿಕ ಭದ್ರತಾ ಸಿಬ್ಬಂದಿ. ಅಧಿಕೃತವಾಗಿ ಇಷ್ಟಲ್ಲದೆ ಚುನಾವಣೆಗಳಿಗೆ ಪರೋಕ್ಷವಾಗಿ ನೆರವಾಗುವ ಮೂರು ಕೋಟಿ ಇತರೇ ನೌಕರರು. ಇಷ್ಟು ದೊಡ್ಡ ಮಟ್ಟದ ಚುನಾವಣಾ ವ್ಯವಸ್ಥೆ ಹೊಂದಿರುವ ನಮ್ಮ ದೇಶದಲ್ಲಿ ಇದುವರೆಗು ಬಹುತೇಕ ಚುನಾವಣೆಗಳು ಶಾಂತಿಯುತವಾಗಿ (ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಚುನಾವಣೆಗಳನ್ನು ಹೊರತು ಪಡಿಸಿದರೆ) ನಡೆದಿದ್ದು ತಮ್ಮ ವಿಸ್ವಾಸಾರ್ಹತೆಯನ್ನು ಉಳಿಸಿಕೊಂಡು ಬರುತ್ತಿವೆ.
ಅದರೆ ಈ ಬಾರಿ ನಡೆದ ಇದುವರೆಗಿನ ಮೂರು ಹಂತದ ಚುನಾವಣೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಚುನಾವಣಾ ನೀತಿ ಸಂಹಿತೆ ಎನ್ನುವುದು ಹಾಸ್ಯಾಸ್ಪದ ವಿಷಯವಾಗಿ ಬಿಟ್ಟಿದೆ. ತಾನೆ ವಿಧಿಸಿದ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಚುನಾವಣಾ ಆಯೋಗ ವಿಫಲವಾಗುತ್ತಿಯೆಂಬ ಅನುಮಾನ ತಲೆದೋರುತ್ತಿದೆ. ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬಹುದಾದಂತ ದತ್ತ ಅಧಿಕಾರವನ್ನು ಹೊಂದಿರುವ ಆಯೋಗ ಯಾಕೊ ಈ ಅಧಿಕಾರವನ್ನು ಉಪಯೋಗಿಸಿಕೊಳ್ಳುವಲ್ಲಿ ಆಸಕ್ತಿಯನ್ನೇನು ತೋರುತ್ತಿಲ್ಲ. ಚುನಾವಣಾ ಆಯೋಗದ ಈ ಕ್ರಿಯಾಹೀನತೆಯನ್ನು ಕಂಡ ಸುಪ್ರೀಂ ಕೋರ್ಟ ಮದ್ಯಪ್ರವೇಶಿಸಿ ನೀತಿಸಂಹಿತೆ ಉಲ್ಲಂಘಿಸಿದವರ ವಿರುದ್ದಕ್ರಮ ತೆಗೆದುಕೊಳ್ಳಲು ಆಯೋಗಕ್ಕೆ ಸೂಚನೆ ನೀಡಬೇಕಾಗಿ ಬಂದಿತು.












