ಏಪ್ರಿ 17, 2014

ಪ್ರಜಾಪ್ರಭುತ್ವದ ಆರೋಗ್ಯದ ಮಾಪಕ ಪತ್ರಿಕೋದ್ಯಮ



ಡಾ ಅಶೋಕ್ ಕೆ ಆರ್

ಪ್ರಜಾಪ್ರಭುತ್ವ ಮಾಧ್ಯಮಗಳ ಪಾತ್ರ ಪ್ರಮುಖವಾದುದು. ಆ ಕಾರಣದಿಂದಲೇ ಪತ್ರಿಕೋದ್ಯಮವನ್ನು ಪ್ರಜಾಪ್ರಭುತ್ವದ ಮೂರು ಆಧಾರ ಸ್ಥಂಭಗಳಾದ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಂಗದ ಜೊತೆಗೆ ಸಮೀಕರಿಸಿ ನಾಲ್ಕನೇ ಸ್ಥಂಭವಾಗಿ ಗುರುತಿಸಲಾಗಿದೆ. ಒಂದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಪತ್ರಿಕೋದ್ಯಮದ ಕೊಡುಗೆ ಅಪಾರ. ಪತ್ರಿಕೋದ್ಯಮಕ್ಕಿರುವ ಸ್ವಾತಂತ್ರ್ಯ ಮತ್ತು ಪತ್ರಕರ್ತರಿಗಿರುವ ರಕ್ಷಣೆಯ ಆಧಾರದ ಮೇಲೆ ಆ ಸಮಾಜದ ಆರೋಗ್ಯವನ್ನಳೆಯುವುದೂ ಇದೆ. Reporters without borders ಸಂಸ್ಥೆಯ ಅಧ್ಯಯನದ ಅನ್ವಯ ಭಾರತ ಪತ್ರಿಕೋದ್ಯಮದ ವಿಷಯದಲ್ಲಿ ಗಳಿಸಿರುವುದು 143ನೇ ಸ್ಥಾನ! ಇತ್ತೀಚಿನ ವರುಷಗಳಲ್ಲಿ ಭಾರತದಲ್ಲಿ ಪತ್ರಿಕೋದ್ಯಮಿಗಳ ಮೇಲೆ ಪತ್ರಕರ್ತರ ಮೇಲಿನ ಹಲ್ಲೆಯ ಪ್ರಕರಣಗಳು ಹೆಚ್ಚುತ್ತಲೇ ಸಾಗಿದೆ. 2013ರಲ್ಲಿ ಭಾರತದ ಎಂಟು ಮಂದಿ ಪತ್ರಕರ್ತರನ್ನು ಹತ್ಯೆಗೈಯ್ಯಲಾಗುತ್ತದೆ. ಈ ಸಂಖ್ಯೆ ಪತ್ರಕರ್ತರಿಗೆ ಅಪಾಯಕಾರಿ ದೇಶವೆನ್ನಿಸಿಕೊಂಡಿರುವ ಪಾಕಿಸ್ತಾನಕ್ಕಿಂತಲೂ ಹೆಚ್ಚು ಎಂಬುದು ಭಾರತದಲ್ಲಿ ಪತ್ರಿಕೋದ್ಯಮ ಎದುರಿಸುತ್ತಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನೆನಪಿಸುತ್ತದೆ.

ಜುಲೈ 28, 2013

ಸಾವಿರ ರುಪಾಯಿಯ ಫೋಟೋ ಮತ್ತು ಲಕ್ಷದ ಪ್ರಚಾರ

ವೈಯಕ್ತಿಕ ವಿಷಯದಿಂದ ಲೇಖನವೊಂದನ್ನು ಪ್ರಾರಂಭಿಸುವುದು ಅಷ್ಟೇನೂ ಸರಿಯಲ್ಲವಾದರೂ ಈ ಲೇಖನಕ್ಕೆ ಪೂರಕವಾಗಿರುವ ಘಟನೆಯಾಗಿರುವುದರಿಂದ ಹೇಳುತ್ತಿದ್ದೇನೆ, ಕ್ಷಮೆಯಿರಲಿ. ಮದುವೆಯಾಗುವ ದಿನ ಹೊಸದೇನನ್ನಾದರೂ ಮಾಡಬೇಕೆಂಬ ಆಸೆಯಿಂದ ನನ್ನ ಗೆಳೆಯನೊಬ್ಬ ಮದುವೆಗೆ ಬಂದವರಿಗೆಲ್ಲ ಒಂದೊಂದು ಗಿಡ ಹಂಚಿದ್ದ, ಒಟ್ಟು ಎರಡು ಸಾವಿರ ಗಿಡಗಳು. ಬಂದವರಿಗೆಲ್ಲ ಯಾವುದಾದರೊಂದು ಪುಸ್ತಕವನ್ನು ತಾಂಬೂಲದ ರೂಪದಲ್ಲಿ ಕೊಡಬೇಕೆಂಬುದು ನನ್ನಾಸೆಯಾಗಿತ್ತು. ಮದುವೆ ನಿಶ್ಚಿತವಾಗುವಷ್ಟರೊಳಗೆ ನನ್ನದೇ ಹದಿನೈದರಷ್ಟು ಕಥೆಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಕಾರಣ ನನ್ನದೇ ಕಥಾ ಸಂಕಲನ ಬಿಡುಗಡೆಗೊಳಿಸಿ ಮದುವೆಮನೆಯಲ್ಲೇ ತಾಂಬೂಲದ ಜೊತೆಗೆ ಕೊಡುವ ನಿರ್ಧಾರವೂ ಆಯಿತು. ಮಾಧ್ಯಮದವರನ್ನೂ ಕರೆಯುವ ತೀರ್ಮಾನವನ್ನೂ ಕೈಗೊಂಡೆವು. ಮದುವೆ ದಿನ ತಾಳಿ ಕಟ್ಟಿದ ಮೇಲೆ ಪುಸ್ತಕ ಬಿಡುಗಡೆ ಕಾರ್ಯಕ್ರಮವಿತ್ತು. ಮಾಧ್ಯಮದವರು ವಿಡಿಯೋ ಕ್ಯಾಮೆರಾಗಳ ಜೊತೆಗೆ ಬಂದು ಮುಂದಿನ ಸಾಲಿನಲ್ಲಿ ಆಸೀನರಾಗಿದ್ದರು. ಆಗ ಗಾಬರಿಯಾಗಿದ್ದು ಹುಡುಗಿ ಮತ್ತು ನನ್ನ ಮನೆ ಕಡೆಯ ನೆಂಟರು!! ಕೆಲವರಿಗಷ್ಟೇ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿಸಿದ್ದೆವು, ಇನ್ನುಳಿದವರಿಗೆ ಅಂದೇ ತಿಳಿಯಲಿ ಎಂದು ಸುಮ್ಮನಿದ್ದೆವು. ಮೀಡಿಯಾದವರು ಕ್ಯಾಮೆರ ಸಮೇತ ದಾಂಗುಡಿಯಿಟ್ಟಿದ್ದು ಕಂಡು ಗಾಬರಿಗೊಂಡ ಜನ ಅವರ ಬಳಿ ಹೋಗಿ ಏನು ಸಮಾಚಾರ ಎಂದು ವಿಚಾರಿಸಿ ಪುಸ್ತಕ ಬಿಡುಗಡೆಯ ಬಗ್ಗೆ ತಿಳಿದು ನಿಟ್ಟುಸಿರುಬಿಟ್ಟರು!! ಜನ ಗಾಬರಿಗೊಂಡಿದ್ದಾದರೂ ಯಾಕೆ? ಯಾವುದೇ ದೃಶ್ಯ ಮಾಧ್ಯಮದಲ್ಲಿ ಮದುವೆಯ ಸುದ್ದಿ ಬರುವುದು ಹುಡುಗ/ಹುಡುಗಿ ಓಡಿ ಹೋದಾಗ ಅಥವಾ ಮತ್ಯಾವುದೋ ರಂಪ ರಾಮಾಯಣವಾದಾಗ. ಮಾಧ್ಯಮದವರಿದ್ದಾರೆಂದರೆ ಅಲ್ಲೇನೋ ಕೆಟ್ಟದ್ದು ನಡೆಯುತ್ತಿದೆ ಎಂಬ ಭಾವನೆಯೇ ತುಂಬಿ ಹೋಗಿದೆ ಜನರಲ್ಲಿ. ಅದೇ ಕಾರಣದಿಂದ ನನ್ನ ಮದುವೆಯ ದಿನ ನೆಂಟರಿಷ್ಟರು ಗಾಬರಿಯಾಗಿದ್ದರು! ಇದು ನಮ್ಮ ಮಾಧ್ಯಮಗಳು ಬೆಳೆಸಿಕೊಂಡಿರುವ ಪ್ರಭಾವಳಿ!

ಅಕ್ಟೋ 19, 2012

ತನಿಖಾ ವರದಿಯ ನೈತಿಕತೆಯೇ ಪ್ರಶ್ನಾರ್ಹವೆನಿಸತೊಡಗಿದಾಗ?!



ಡಾ ಅಶೋಕ್ ಕೆ ಆರ್

ಮಹಾಲಯ ಅಮಾವಾಸೆಗೆಂದು ಶನಿವಾರ ಊರು ತಲುಪಿ ಕನ್ನಡದ ಸುದ್ದಿವಾಹಿನಿಗಳನ್ನು ನೋಡೋಣವೆಂದು ಚಾನೆಲ್ಲನ್ನು ಬದಲಿಸುತ್ತ ಕುಳಿತಾಗ ನಟಿ ಹೇಮಾಶ್ರಿಯ ಸಾವಿನ ಸುತ್ತ ಗೋಜಲು – ಗೊಂದಲಗಳನ್ನು ನಿರ್ಮಿಸುವಲ್ಲಿ ಎಲ್ಲಾ ವಾಹಿನಿಗಳೂ ಪೈಪೋಟಿಯ ಮೇಲೆ ಕಾರ್ಯನಿರ್ವಹಿಸುತ್ತಿದ್ದವು. ‘ಅಯ್ಯೋ! ಮೂರು ದಿನದಿಂದ ಎಲ್ಲಾ ಚಾನೆಲ್ಲಿನಲ್ಲೂ ಇದೇ ಸುದ್ದಿ. ಸತ್ತೋಳ ಬಗ್ಗೆ ನಿಜವೋ – ಸುಳ್ಳೋ ಬೇಡದ ಮಾತನ್ನೆಲ್ಲಾ ಆಡುತ್ತಿದ್ದಾರೆ’ ಎಂದರು ಮನೆಯವರು. ಈ ಸುದ್ದಿ ವಾಹಿನಿಗಳ ಗೋಳೇ ಇಷ್ಟು ಎಂದುಕೊಳ್ಳುತ್ತಾ ಚಾನೆಲ್ ಬದಲಿಸಿದೆ. ಮಾರನೇ ದಿನ ಮತ್ತೊಂದು ‘ಪ್ರಹಸನಕ್ಕೆ’ ಕನ್ನಡ ವಾಹಿನಿಗಳು ಸಿದ್ಧಗೊಳ್ಳುತ್ತಿರಬಹುದೆಂಬ ಯಾವುದೇ ಸೂಚನೆಯಿಲ್ಲದೆ ಭಾನುವಾರ ಪಬ್ಲಿಕ್ ಟಿ ವಿ ಹಾಕಿದೆ!!

ಜನ 19, 2012

ಪಬ್ಲಿಕ್ ಟಿ.ವಿ ಪಬ್ಲಿಕ್ಕಿಗಾಗಿಯೇ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತಾ . . .

ಡಾ. ಅಶೋಕ್. ಕೆ. ಆರ್.
  ಹತ್ತರ ನಂತರ ಹನ್ನೊಂದಾಗುವುದಿಲ್ಲ ಎಂಬ ಭರವಸೆಯೊಂದಿಗೆ ಇದೇ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕನ್ನಡಕ್ಕೆ ಮತ್ತೊಂದು ಸುದ್ದಿವಾಹಿನಿಯ ರಂಗಪ್ರವೇಶವಾಗುತ್ತಿದೆ. ಪಬ್ಲಿಕ್ ಟಿ.ವಿ ಎಂಬ ಹೆಸರಿನಲ್ಲಿ. ಕನ್ನಡಪ್ರಭದಲ್ಲಿ ಕೆಲಸದಲ್ಲಿದ್ದ ನಂತರ ಕೆಲಕಾಲ ಸುವರ್ಣವಾಹಿನಿಯನ್ನು ಮುನ್ನಡೆಸಿದ ರಂಗನಾಥ್ ಪಬ್ಲಿಕ್ ಟಿ.ವಿಯ ಕ್ಯಾಪ್ಟನ್. ಸುವರ್ಣಸುದ್ದಿವಾಹಿನಿಗೆ ಹೋಗುವಾಗ ತಮ್ಮೊಡನೆ ಕನ್ನಡಪ್ರಭದ ವಿಶ್ವಾಸಾರ್ಹ ಪ್ರತಿಭಾವಂತ ಪತ್ರಕರ್ತರನ್ನು ಕರೆದೊಯ್ದ ರಂಗನಾಥ್ ಅದೇ ಪತ್ರಕರ್ತರನ್ನು ಹೊಸ ವಾಹಿನಿಯ ಬೆನ್ನೆಲುಬಾಗಿ ನಿಲ್ಲಿಸಿಕೊಂಡಿದ್ದಾರೆ. ಯಶ ಪಡೆಯುತ್ತಾರಾ? ನಿರ್ಧರಿಸಲು ಹೆಚ್ಚು ಸಮಯ ಕಾಯಬೇಕಿಲ್ಲ.