-      ಡಾ. ಅಶೋಕ್, ಕೆ, ಆರ್
| ಪ್ರಶಸ್ತಿ ಪಡೆದ ಕೆವಿನ್ ಚಿತ್ರ | 
| ಕೆವಿನ್ ಕಾರ್ಟರ್ | 
             ಅದು
1993ರ ಇಸವಿ. ಧೀರ್ಘಕಾಲೀನ ಬರ ಮತ್ತು ಅಂತರ್ಯುದ್ಧದಿಂದ ಸೂಡಾನ್ ದೇಶ ಬಸವಳಿದಿತ್ತು. ಯು ಎನ್ ನ
ವತಿಯಿಂದ ಕೆವಿನ್ ಕಾರ್ಟರ್ ಎಂಬ ಛಾಯಾವರದಿಗಾರ ಸೂಡಾನ್ ದೇಶದಲ್ಲಿ ಸಂಚರಿಸುತ್ತಿದ್ದ. ಅಲ್ಲಿ ಆತ
ತೆಗೆದ ಒಂದು ಚಿತ್ರಕ್ಕೆ 1994ರಲ್ಲಿ ಪ್ರತಿಷ್ಠಿತ ಪುಲಿಟ್ಜಿರ್ ಪ್ರಶಸ್ತಿ ಲಭಿಸಿತು. ಬರಪೀಡಿತ ಪ್ರದೇಶದ
ಅಪೌಷ್ಟಿಕ ಮಗುವೊಂದು ಆಯಾಸದಿಂದ ತಲೆತಗ್ಗಿಸಿ ಕುಳಿತಿದೆ, ಹಿನ್ನೆಲೆಯಲ್ಲಿ ಆ ಮಗುವಿನ ಸಾವಿಗೆ ಕಾದಿರುವಂತೆ
ರಣಹದ್ದೊಂದು ಕುಳಿತಿರುವ ಚಿತ್ರವದು. 




