ಡಾ
ಅಶೋಕ್ ಕೆ ಆರ್
‘ಸತ್ತವರ
ಬಗ್ಗೆ ಕೆಟ್ಟದ್ದಾಡಬಾರದಂತೆ’; ಅವರು ಬದುಕಿದ್ದಾಗ ಕೆಟ್ಟವರಾಗಿದ್ದಾಗಲೂ ಸಹ! ವ್ಯಕ್ತಿಯೇ ಸತ್ತು
ಹೋದ ಮೇಲೆ ಆತನ ಹಳೆಯ ಪುರಾಣಗಳನ್ನು ಕೆದಕುವುದು ಬೇಡವೆಂಬ ಭಾವನೆಯನ್ನೇನೋ ಒಪ್ಪಬಹುದು ಆದರೆ ಇದ್ದ
– ಇರದ – ಸೃಷ್ಟಿಸಲ್ಪಟ್ಟ ವಿಶೇಷಣಗಳನ್ನೆಲ್ಲ ಸತ್ತ ವ್ಯಕ್ತಿಯ ವ್ಯಕ್ತಿತ್ವಕ್ಕೆ ಆರೋಪಿಸಿ ಸತ್ತವರಿಗೇ
ಬೇಸರ ಬರಿಸುವಷ್ಟು ಹೊಗಳುವುದು ಎಷ್ಟರಮಟ್ಟಿಗೆ ಸರಿ?! ಶಿವಸೇನೆ ಮುಖ್ಯಸ್ಥ ಬಾಳ ಠಾಕ್ರೆಯ ಮರಣದ ನಂತರ
ಪತ್ರಿಕೆಗಳಲ್ಲಿ, ಅಂತರ್ಜಾಲದಲ್ಲಿ ಬಾಳ ಠಾಕ್ರೆಯ ಬಗ್ಗೆ ಬರುತ್ತಿರುವ ವರದಿಗಳನ್ನು ಓದಿದರೆ ನಮ್ಮ
ಸಮಾಜದ ಅಧಃಪತನದ ಮನಸ್ಥಿತಿಯ ಪ್ರತಿಬಿಂಬದಂತೆಯೇ ಕಾಣಿಸುತ್ತಿದೆ.