Dr Ashok K R
ಪ್ಲಾಟ್‍ಫಾರಂ ನಂ 1
ನಿಲ್ದಾಣ 1
“ನನ್ನ
ತಾತ ತಲೆಯಲ್ಲಿ ಯಾವ ಭಾವನೆ ಇಟ್ಟುಕೊಂಡು ನನಗೀ ಹೆಸರು ಇಟ್ಟರೋ? ತೀರ ಮೊನ್ನೆ ಮೊನ್ನೆ ಎನ್‍ಡಿಟಿವಿ
ಇಂಡಿಯಾದಲ್ಲಿ ಕಾರು ಮತ್ತು ಬೈಕುಗಳ ಬಗ್ಗೆ ಕಾರ್ಯಕ್ರಮ ನಡೆಸಿಕೊಡುವವನ ಹೆಸರೂ ಕ್ರಾಂತಿ ಸಂಭವ್ ಎಂದು
ನೋಡಿದಾಗ ಮನ ನಿರಾಳವಾಯಿತು. ನನ್ನಿಂದ ಯಾವುದಾದರೂ ಕ್ರಾಂತಿ ಸಂಭವಿಸುತ್ತದೆ ಎಂದು ಭಾವಿಸಿದರೋ ಅಥವಾ
ನನ್ನ ಕಾಲಘಟ್ಟದಲ್ಲಿ ದೇಶದಲ್ಲೊಂದು ಮಹತ್ತರ ಬದಲಾವಣೆಯಾಗುತ್ತೆ ಎಂದು ಕನಸಿದ್ದರೋ ಗೊತ್ತಿಲ್ಲ. ಮದ್ದೂರಿನ
ಬೆಸಗರಹಳ್ಳಿಯಲ್ಲಿ ಹುಟ್ಟಿದ ಹೈದನಿಗೆ ಕ್ರಾಂತಿ ಸಂಭವ್ ಎಂದು ಹೆಸರಿಟ್ಟುಬಿಟ್ಟರು. ಶಾಲೆಯಲ್ಲಿ ಏನೇ
ತಪ್ಪು ಮಾಡಿದರೂ ನನ್ನ ತಪ್ಪಿಗೆ ದಂಡಿಸುವುದನ್ನು ಬಿಟ್ಟು ನನ್ನ ಹೆಸರಿಡಿದುಕೊಂಡು ವ್ಯಂಗ್ಯವಾಡುತ್ತಿದ್ದರು.
‘ಏನಪ್ಪಾ ಕ್ರಾಂತಿ ಮಾಡೋನು ಈ ರೀತಿ ಮಾಡ್ತೀಯಲ್ಲ’ ಎನ್ನುವವರ ಮಾತಲ್ಲಿ ಲೇವಡಿ ಎದ್ದು ಕಾಣುತ್ತಿತ್ತು.
ಅವತ್ತು ಮನೆಗೆ ಹಿಂದಿರುಗಿದ ತಕ್ಷಣ ತಾತನ – ಅಜ್ಜ ಅಷ್ಟೊತ್ತಿಗಾಗಲೇ ತೀರಿಕೊಂಡಿದ್ದರು – ಫೋಟೋ ತೆಗೆದುಕೊಂಡು
ಅಟ್ಟ ಸೇರಿ ಮನಸಾರೆ ಮನಸ್ಸಿನಲ್ಲೇ ಬಯ್ಯುತ್ತಿದ್ದೆ. ನೀತಿ ಕಥೆಗಳನ್ನು ಹೇಳಿ ಹೇಳಿ ನನ್ನಲ್ಲೊಂದು
ಸ್ಥೈರ್ಯ ಉತ್ಸಾಹ ಮೂಡಿಸಿದ್ದ ಅದೇ ತಾತ ಕ್ರಾಂತಿ ಸಂಭವ್ ಎಂದು ಹೆಸರಿಟ್ಟು ಜನ್ಮ ಜನ್ಮಕ್ಕೂ ಸಾಕಾಗುವಷ್ಟು
ಕೀಳರಿಮೆ ಮೂಡಲು ಕಾರಣವಾಗಿಬಿಟ್ಟ”
Also Readವಾಡಿ ಜಂಕ್ಷನ್ .... ಭಾಗ 1